ನವದೆಹಲಿ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 4,510 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 46,216ಕ್ಕೆ ಇಳಿದಿದೆ.
ಇದೇ ಅವಧಿಯಲ್ಲಿ 33 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,28,403 ಏರಿದೆ. ಕೇರಳ ಒಂದರಲ್ಲೇ 19 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ 4,45,47,599 ಮಂದಿಗೆ ಕೋವಿಡ್ ದೃಢಪಟ್ಟಿದೆ.