ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ಬುಧವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿ ಯಲ್ಲಿ ಕೇವಲ 4,575 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 145 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,75,883ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,15,355ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 46,962ಕ್ಕೆ ಇಳಿಕೆಯಾಗಿದೆ
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,79,33,99,555 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.