Saturday, 14th December 2024

45,892 ಮಂದಿಗೆ ಕರೋನಾ ಸೋಂಕು ದೃಢ

#corona

ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ಹರಡುವಿಕೆಯಲ್ಲಿ ಇಳಿಕೆ ಕಂಡಿದೆ. 45,892 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 817 ಸೋಂಕಿತರು ಮೃತಪಟ್ಟಿದ್ದು, 44,291 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇನ್ನು ದೇಶದಲ್ಲಿ ಒಟ್ಟು 3,07,09,557 ಜನರಿಗೆ ಸೋಂಕು ತಗಲಿದ್ದು, ಈ ಪೈಕಿ 4,05,028 ಮಂದಿ ಮೃತಪಟ್ಟಿದ್ದಾರೆ. 4,60,704 ಸಕ್ರೀಯ ಪ್ರಕರಣಗಳಿದ್ದು 2,98,43,825 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಕೊರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಒಟ್ಟಾರೆ ದೇಶದಲ್ಲಿ ಈವರೆಗೆ 36,48,47,549 ಜನರಿಗೆ ಕರೋನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.