Wednesday, 9th October 2024

ಸೋಂಕು ಮತ್ತೆ ಏರಿಕೆ: 46,164 ಕೋವಿಡ್‌ ಪ್ರಕರಣಗಳು ದೃಢ

#corona

ನವದೆಹಲಿ: ಮಹಾಮಾರಿ ಕರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 607 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 3,25,58,530ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,36,365 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,33,725ಕ್ಕೆ ತಲುಪಿದೆ. 34,159 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,17,88,440ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 60,38,46,475 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.