Sunday, 28th April 2024

ಕರೋನಾ ಇಳಿಕೆ: 474 ಹೊಸ ಪ್ರಕರಣ ಪತ್ತೆ

covid
ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 474 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,67,398ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಮೃತಪಡುವವರ ಒಟ್ಟು ಸಂಖ್ಯೆ 5,30,533ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,918ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 800 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,27,724ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,81,36,068 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.
error: Content is protected !!