ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 4,858 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,355 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 48,027 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,62,664 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.