Friday, 13th December 2024

48,698 ಮಂದಿಗೆ ಸೋಂಕು ದೃಢ

#corona

ನವದೆಹಲಿ : ದಿನದಿಂದ ದಿನಕ್ಕೆ ಭಾರತದಲ್ಲಿ ಕರೋನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, 48,698 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,01,83,143 ಕ್ಕೆ ಏರಿಕೆಯಾಗಿ, 1,183 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಮೃತರ ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ.

64,818 ಸೋಂಕಿತರು ಚೇತರಿಸಿಕೊಂಡಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 2,91,93,085 ಕ್ಕೆ ಏರಿಕೆಯಾಗಿದೆ.