Wednesday, 11th December 2024

ಕರೋನಾ ಸೋಂಕಿತರ ಸಂಖ್ಯೆ 48,786

#corona

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕಳೆದ 24 ಗಂಟೆಯಲ್ಲಿ 48,786 ಆಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ.

1005 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,99,459ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 5,23,257 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 2,94,88,918 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 61,588 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.