Saturday, 23rd November 2024

ಯಮುನಾ ಎಕ್ಸಪ್ರೆಸ್ ವೇನಲ್ಲಿ ರಸ್ತೆ ಅಪಘಾತ: ಐವರ ಸಾವು

ನೋಯ್ಡಾ: ಗ್ರೇಟರ್ ನೋಯ್ಡಾದ ಯಮುನಾ ಎಕ್ಸಪ್ರೆಸ್ ವೇನಲ್ಲಿ ಗುರುವಾರ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ನಾಲ್ವರು ಮತ್ತು ಕರ್ನಾ ಟಕದ ಒಬ್ಬರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರಿದ್ದ ಮಹೀಂದ್ರಾ ಬೊಲೆರೊದಲ್ಲಿ ಆಗ್ರಾ ದಿಂದ ನೋಯ್ಡಾ ಕಡೆಗೆ ತೆರಳುತ್ತಿತ್ತು.

ಜೆವಾರ್ ಟೋಲ್ ಪ್ಲಾಜಾ ಬಳಿ ಕಾರು ಹಿಂಬದಿಯಿಂದ ಡಂಪರ್ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್‍ರು ತಿಳಿಸಿದ್ದಾರೆ. ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಕಚೇರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿ ಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ತಿಳಿಸಿದೆ.