Friday, 13th December 2024

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕರಿಗೆ ಗಾಯ

ಪಾಲ್ಘರ್‌: ಮಹಾರಾಷ್ಟ್ರ ರಾಜ್ಯದ ಪಾಲ್ಘರ್‌ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿ ದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ಶನಿವಾರ ರಾತ್ರಿ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಸ್ಫೋಟದಿಂದಾಗಿ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಯಿಸರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.