Wednesday, 11th December 2024

501 ಜನರಲ್ಲಿ ಕರೋನಾ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗುತ್ತಿದ್ದು, ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆಯೊಂದಿಗೆ ಕಳೆದ 24 ಗಂಟೆಯಲ್ಲಿ 501 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಕೋವಿಡ್ ಗೆ ಇಬ್ಬರು ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ 5,30,535 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,561 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,28,580 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,19,82,38,649 ಡೋಸ್ ಲಸಿಕೆ ಹಾಕಲಾಗಿದೆ.