Friday, 13th December 2024

5,076 ಕೋವಿಡ್ ಪ್ರಕರಣಗಳು ದೃಢ

ವದೆಹಲಿ: ದೇಶದಾದ್ಯಂತ ಭಾನುವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,076 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,945ಕ್ಕೆ ಇಳಿಕೆಯಾಗಿದೆ.

ಕಳೆದೊಂದು ದಿನದಲ್ಲಿ 5,970 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,39,19,264 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,44,95,359 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 5,28,150 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೇಶದಲ್ಲಿ ಈವರೆಗೆ 88.94 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 214.95 ಕೋಟಿ ಲಸಿಕೆ ಡೋಸ್ ವಿತರಿಸಲಾಗಿದೆ.