Thursday, 12th December 2024

51,667 ಹೊಸ ಕೋವಿಡ್‌ ಪ್ರಕರಣಗಳು ದೃಢ

#covid

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 51,667 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದೆ. 1,329 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕಿತರ ಸಂಖ್ಯೆ 3,01,34,445 ಕ್ಕೆ ಏರಿಕೆಯಾಗಿದೆ. ಆ ಪೈಕಿ 3,93,310 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 2,91,28,267 ಮಂದಿ ಗುಣಮುಖರಾಗಿದ್ದಾರೆ. 6,12,868 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 1,24,911, ಕರ್ನಾಟಕದಲ್ಲಿ 1,10,546, ಕೇರಳದಲ್ಲಿ 1,00,308, ತಮಿಳುನಾಡಿನಲ್ಲಿ 49,845, ಆಂಧ್ರಪ್ರದೇಶದಲ್ಲಿ 49,683 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ 30,79,48,744 ಡೋಸ್‌ ಕೋವಿಡ್‌ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.