Monday, 25th November 2024

5,326 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆ

#corona

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,326 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ.

453 ಮಂದಿ ಕೋವಿಡ್ ನಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಈವರೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ 3,47,52,164ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ದೇಶಾದ್ಯಂತ 4,78,007 ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 79,097ಕ್ಕೆ ಇಳಿಕೆಯಾಗಿದೆ.

ಕಳೆದ 24ಗಂಟೆಗಳಲ್ಲಿ 8,043 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 3,170 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ.