Saturday, 23rd November 2024

5,476 ಕೋವಿಡ್ ಪ್ರಕರಣ ಪತ್ತೆ

covid

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ. ಭಾನುವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 5,476 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 158 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,62,953ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,14,856ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 59,442ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯ ವರೆಗೂ 1,78,83,79,249 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.