Saturday, 14th December 2024

556 ಹೊಸ ಕರೋನಾ ಸೋಂಕು ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 556 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,68,523 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 6,782 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.  ಕೇರಳದಲ್ಲಿ 15 ಸೇರಿದಂತೆ ದೇಶದಾದ್ಯಂತ 17 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ, 219.85 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.