Sunday, 24th November 2024

5,747 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಶನಿವಾರ ಕೊಂಚ ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,747 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,302 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 46,848 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣ ಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,53,374 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,16,41,70,550 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,40,211 ಜನರಿಗೆ ಕೋವಿಡ್ ಟೆಸ್ಟ್ ಮಾಡ ಲಾಗಿದೆ.