Wednesday, 9th October 2024

ಮಹಾರಾಷ್ಟ್ರದಲ್ಲಿ ಕರೋನಾ ಅಟ್ಟಹಾಸ: 5,787 ಹೊಸ ಪ್ರಕರಣಗಳು ಪತ್ತೆ

#corona

ಮುಂಬೈ : ಮಹಾರಾಷ್ಟ್ರದಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಶನಿವಾರ 5 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಕಿಲ್ಲರ್ ಸೋಂಕಿಗೆ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 5,787 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, , ಒಟ್ಟಾರೆ ಸೋಂಕಿತರ ಸಂಖ್ಯೆ 63,87,863ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 134 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,34,909ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ಮಹಾರಾಷ್ಟ್ರದಲ್ಲಿ 63,262 ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ.