ಘಟನೆಯಲ್ಲಿ ಸಕೀನಾ ಬೇಗಂ, ಆಕೆಯ ಇಬ್ಬರು ಹೆಣ್ಣುಮಕ್ಕಳಾದ ನಸೀಮಾ ಅಖ್ತರ್, ರುಬೀನಾ ಬಾನು, ಪುತ್ರ ಝಾಪರ್ ಸಲೀಂ ಮತ್ತು ಸಂಬಂಧಿಗಳಾದ ನೂರ್ ಉಲ್ ಹಬೀಬ್, ಸಜಾದ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಜಮ್ಮುವಿನ ಸಿದ್ರಾ ಪ್ರದೇಶದಲ್ಲಿರುವ ಮನೆಯಲ್ಲಿ ಆರು ಶವಗಳು ಪತ್ತೆಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪೋಸ್ಟ್ ಮಾರ್ಟ್ಂ ವರದಿ ಬಂದ ನಂತರ ಇದು ಕೊಲೆಯೋ ಅಥವಾ ಸಾಮೂಹಿಕ ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.