ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 600 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರೊಂದಿಗೆ ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭ ಗಳಿಸಿದೆ.
ಮುಂಬೈ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 641.35 ಅಂಕ ಏರಿಕೆಯೊಂದಿಗೆ 48,519.80 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ, ಎನ್ಎಸ್ಇ ನಿಫ್ಟಿ 178.90 ಅಂಕ ಜಿಗಿತ ಕಂಡಿದ್ದು, 14,520.25ಅಂಕಗಳ ಗಡಿಗೆ ಏರಿದೆ.
ಸೆನ್ಸೆಕ್ಸ್ ಏರಿಕೆಯಿಂದ ಐಸಿಐಸಿಐ ಬ್ಯಾಂಕ್ ಷೇರುಗಳು ಶೇ.5ರಷ್ಟು ಲಾಭ ಗಳಿಸಿದ್ದು, ಐಸಿಐಸಿಐ ಬ್ಯಾಂಕ್ ನ ತ್ರೈಮಾಸಿಕ ಲಾಭ ದಲ್ಲಿ ನಾಲ್ಕರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷದ ಮಾರ್ಚ್ ಗಿಂತ ಈ ವರ್ಷ 4,886 ಕೋಟಿ ರೂಪಾಯಿ ಲಾಭ ಗಳಿಸಿದೆ.
ಮತ್ತೊಂದೆಡೆ ಆಲ್ಟ್ರಾ ಟೆಕ್ ಸಿಮೆಂಟ್, ಎಸ್ ಬಿಐ, ಒಎನ್ ಜಿಸಿ, ಆಯಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭಗಳಿಸಿವೆ.