Sunday, 15th December 2024

60,471 ಹೊಸ ಸೋಂಕು ಪ್ರಕರಣಗಳು ಪತ್ತೆ

#covid

ನವದೆಹಲಿ: ರಾಷ್ಟ್ರೀಯ ಆರೋಗ್ಯ ಇಲಾಖೆ ನೀಡಿದ ಮಾಹಿತಿಯನ್ವಯ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 60,471 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

2726 ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 3.77 ಲಕ್ಷಕ್ಕೇರಿದೆ. 24 ಗಂಟೆ ಅವಧಿಯಲ್ಲಿ 1,17,525 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 9,133,378 ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ 12,772 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 8129 ಸೋಂಕು ಪ್ರಕರಣಗಳು, ಕೇರಳ ರಾಜ್ಯದಲ್ಲಿ 8129 ಸೋಂಕು ಪ್ರಕರಣಗಳು, ಕರ್ನಾಟಕದಲ್ಲಿ 6835 ಪ್ರಕರಣಗಳು ಮತ್ತು ಆಂಧ್ರ ಪ್ರದೇಶ ರಾಜ್ಯದಲ್ಲಿ 4,549 ಸೋಂಕು ಪ್ರಕರಣಗಳು ಪತ್ತೆ ಯಾಗಿದೆ.