Saturday, 14th December 2024

6,298 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

covid

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.

ಕಳೆದ 24 ಗಂಟೆಯಲ್ಲಿ ಮತ್ತೆ 6 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನದಲ್ಲಿ 6,298 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಈವರೆಗೆ 5,28,273 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,47,756 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ 3,33,964 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.