Saturday, 27th April 2024

635 ಹೊಸ ಕರೋನಾ ಪ್ರಕರಣ ಪತ್ತೆ

#corona
ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 635 ಹೊಸ ಪ್ರಕರಣ ಪತ್ತೆ ಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,67,311ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,546ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,175ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1010 ಮಂದಿ ಗುಣಮುಖ ರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,29,590ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,47,344 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,33,56,300 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವ ರೆಗೂ 2,19,83,58,500 ಜನರಿಗೆ ಲಸಿಕೆ ನೀಡಲಾಗಿದೆ.
error: Content is protected !!