Tuesday, 15th October 2024

6,561 ಕೋವಿಡ್ ಪ್ರಕರಣ ಪತ್ತೆ, 142 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ. ಗುರುವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 6,561 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 142 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,45,160ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ 514,208ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 77,152ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 14,947 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡ ವರ ಸಂಖ್ಯೆ 4,23,53,620ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ 7,84,059 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 76,91,67,052 ಮಂದಿಯನ್ನು ಪರೀಕ್ಷೆ ಗೊಳಪಡಿಸಲಾಗಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,77,79,92,977 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.