Sunday, 15th December 2024

67,084 ಹೊಸ ಕೋವಿಡ್ ಸೋಂಕಿನ ಪ್ರಕರಣ ಪತ್ತೆ

covid

ನವದೆಹಲಿ: ಭಾರತದಲ್ಲಿ ಗುರುವಾರ ದೇಶದಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,06,520 ಆಗಿದೆ.

ದೇಶದಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,06,520ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,90,789 ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 1,67,882 ಮಂದಿ ಗುಣಮುಖರಾಗುವುದರೊಂದಿಗೆ, ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,11,80,751ಕ್ಕೆ ಏರಿಕೆಯಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,71,28,19,947 ಡೋಸ್ ಲಸಿಕೆ ವಿತರಿಸಲಾಗಿದೆ.