ನವದೆಹಲಿ: 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 6,822 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 220 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
10,004 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 95,014 ಸಕ್ರಿಯ ಪ್ರಕರಣಗಳಿದ್ದು, ಇದು 554 ದಿನಗಳಲ್ಲೇ ಕನಿಷ್ಠ ವಾಗಿದೆ. ದೇಶದಾದ್ಯಂತ ಈವರೆಗೆ ಒಟ್ಟು 128.76 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.