ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,915 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಇದೇ ಅವಧಿಯಲ್ಲಿ 180 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿಅಂಶಗಳಿಂದ ಗೊತ್ತಾಗಿದೆ. ಕೋವಿಡ್ನಿಂದ ಸತ್ತವರ ಸಂಖ್ಯೆ 5,14,023ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, 92,472 ಕ್ಕೆ ಇಳಿದಿದೆ. ಈ 24 ಗಂಟೆಗಳಲ್ಲಿ 16,864 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.ಈ ವರೆಗೆ ದೇಶದಲ್ಲಿ 177.70 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.