ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದ 7 ಮಂದಿ ಉಗ್ರರನ್ನು ವಶಕ್ಕೆ ಪಡೆದಿವೆ.
ಶೋಪಿಯಾನ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಸಹಚರ ಜಾಲವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನಾ ಪಡೆಗಳು ಪತ್ತೆ ಮಾಡಿದ್ದು, ಸಂಘಟನೆಯ ಏಳು ಸಹಚರರನ್ನು ಬಂಧಿಸಿವೆ.
ಸಹಚರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಾಗಿ ಗ್ರೌಂಡ್ ವರ್ಕ್ (ಉಗ್ರ ಸಂಘಟನೆಗೆ ಬೇಕಾದ ಎಲ್ಲ ರೀತಿಯ ನೆರವು ನೀಡುವವರು) ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತರಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶೋಪಿಯಾನ್ ಪೊಲೀಸರು ಇದೀಗ ತಮ್ಮ ಕಾರ್ಯಾಚರಣೆಯನ್ನು ಬಿಗಿ ಮಾಡಿದೆ.