ದಮೋಹ್: ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ (Accident News)ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮಣ್ಣ ಗ್ರಾಮದ ಬಳಿ ಮಧ್ಯಾಹ್ನ 1.30 ರಿಂದ 2 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ದಮೋಹ್ ಪೊಲೀಸ್ ವರಿಷ್ಠಾಧಿಕಾರಿ ಶೃತಿಕೀರ್ತಿ ಸೋಮವಂಶಿ ತಿಳಿಸಿದ್ದಾರೆ.
ಗಾಯಗೊಂಡವರನ್ನು ವಿಶೇಷ ಕಾರಿಡಾರ್ ಮೂಲಕ ಜಬಲ್ಪುರಕ್ಕೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮತ್ತು ಗ್ರಾಮದ ನಿವಾಸಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Ground Gate Collapse: ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ; ಅಧಿಕಾರಿಗಳ ಅಮಾನತು
ಬೆಂಗಳೂರು: ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು (Ground Gate Collapse) ಮೃತಪಟ್ಟಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ನಿರ್ಲಕ್ಷ್ಯ ತೋರಿರುವ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಕಾರ್ಯಪಾಲಕ ಎಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.
2021 ರ ಮೇ 21 ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಇನ್ನು ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣ ವರದಿ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Israel strikes Lebanon : ಇಸ್ರೇಲ್ ದಾಳಿಯಲ್ಲಿ ಹೆಜ್ಬುಲ್ಲಾದ ಉಗ್ರರ ಕಮಾಂಡರ್ ಅಲಿ ಕರಿಕಿ ಬಲಿ
ಏನಿದು ಘಟನೆ?
ಮಲ್ಲೇಶ್ವರಂನ ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು 11 ವರ್ಷದ ನಿರಂಜನ್ ಎಂಬ ಬಾಲಕ ಮೃತಪಟ್ಟ ಘಟನೆ ಸೆ.22ರಂದು ನಡೆದಿತ್ತು. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಪುತ್ರ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಗೇಟ್ ಬಾಲಕನ ಮೇಲೆಯೇ ಬಿದ್ದಿತ್ತು. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಬಾಲಕನನ್ನು ಕೆ.ಸಿ. ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬಾಲಕ ಕೊನೆಯುಸಿರೆಳೆದಿದ್ದ. ಮೃತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ನಿರಂಜನ್ ತಂದೆ ವಿಜಯಕುಮಾರ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಪೈಪ್ ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು.