ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ. ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 7,554 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 223 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,38,599ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,14,066ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 85,680ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 14,123 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,23,38,673ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,77,70,25,914 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.