Thursday, 3rd October 2024

7,591 ಹೊಸ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸೋಮವಾರ ಅಂತ್ಯಗೊಂಡ 24 ಗಂಟೆಗಳಲ್ಲಿ 7,591 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಭಾನುವಾರ 9,436 ಪ್ರಕರಣಗಳು ಪತ್ತೆಯಾಗಿದ್ದವು. ಇದೇ ಅವಧಿಯಲ್ಲಿ 45 ಸಾವುಗಳು ಸಂಭವಿಸಿವೆ.

ದೇಶದಲ್ಲಿ ಈವರೆಗೆ 5,27,799 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 9,206 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 84,931ಕ್ಕೆ ಇಳಿದಿದೆ.

ದೇಶದಲ್ಲಿ ಈ ವರೆಗೆ 211.91 ಕೋಟಿ ಕೋವಿಡ್‌ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.