Friday, 20th September 2024

ಸ್ವದೇಶಕ್ಕೆ ಮರಳಿದ 778ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು

ವದೆಹಲಿ: ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ವಿರೋಧಿ ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ದಿನೇ ದಿನೇ ಉಲ್ಬಣಿಸಿದ್ದು, ಅಲ್ಲಿರುವ 778ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.

ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಬಂಧಿಸಿದ ಅಧಿಕಾರಿ ಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ ಎಂದು ಎಂಇಎ ಹೇಳಿದೆ. ‘ಈವರೆಗೂ, 778 ಭಾರತೀಯ ವಿದ್ಯಾರ್ಥಿಗಳು ವಿವಿಧ ಭೂ ಸಾರಿಗೆ ಮೂಲಕ ಭಾರತಕ್ಕೆ ಮರಳಿದ್ದಾರೆ. ಜೊತೆಗೆ, ಹೆಚ್ಚುವರಿಯಾಗಿ ಸುಮಾರು 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳಿಂದ ದೇಶಕ್ಕೆ ಮರಳಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಸುಮಾರು 15.000 ಭಾರತೀಯ ಪ್ರಜೆಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಶುಕ್ರವಾರ ಹೇಳಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ಚಿತ್ತಗಾಂಗ್, ರಾಜ್‌ಶಾಹಿ, ಸಿಲ್ಹೆಟ್ ಮತ್ತು ಖುಲ್ನಾದಲ್ಲಿನ ಸಹಾಯಕ ಹೈಕಮಿಷನ್‌ಗಳು ಭಾರತೀಯ ಪ್ರಜೆಗಳನ್ನು ಮನೆಗೆ ವಾಪಸ್​ ಸಹಾಯ ಮಾಡುತ್ತಿವೆ ಎಂದು MEA ಹೇಳಿದೆ.

‘ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ, ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳು ಕ್ರಮ ಕೈಗೊಂಡಿವೆ ಎಂದು ಪ್ರಕಟಣೆಯಲ್ಲಿ ಹೇಳಿವೆ. ‘ನಮ್ಮ ನಾಗರಿಕರಿಗೆ ಸುಗಮ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಎಂಇಎ ನಾಗರಿಕ ವಿಮಾನಯಾನ, ವಲಸೆ, ಭೂ ಬಂದರುಗಳು ಮತ್ತು ಬಿಎಸ್​ಎಫ್​ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸು ತ್ತಿದೆ ಎಂದು ಅದು ಹೇಳಿದೆ.