Thursday, 12th December 2024

ಕೋವಿಡ್: 796 ಪ್ರಕರಣ ದಾಖಲು

ವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 796 ಪ್ರಕರಣಗಳು ದಾಖ ಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 109 ದಿನಗಳ ಬಳಿಕ 5,000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,93,506) ಏರಿದೆ. 24 ಗಂಟೆಗಳಲ್ಲಿ ಐದು ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,795ಕ್ಕೆ ಏರಿದೆ. ಕರ್ನಾಟಕ, ಹಿಮಾಚಲಪ್ರದೇಶ, ಪುದುಚೇರಿ, ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5,026ರಷ್ಟಾಗಿದ್ದು, ಚೇತರಿಕೆ ದರ ಶೇಕಡ 98.80ರಷ್ಟಿದೆ. ದೇಶದಲ್ಲಿ 220.64 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಮಹಾರಾಷ್ಟ್ರ, ಗುಜರಾತ್‌, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ವೈರಲ್‌ ಸೋಂಕಿನ ಹಠಾತ್‌ ಹೆಚ್ಚಳದ ಬಗ್ಗೆ ಗಮನ ವಹಿಸಬೇಕು ಎಂದು ಹೇಳಿತ್ತು.