Saturday, 7th September 2024

7 ಸಾವಿರ ಗಡಿ ದಾಟಿದ ಕರೋನಾ ಸೋಂಕಿತರ ಸಂಖ್ಯೆ

#corona

ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಏರಿಕೆ ಆಗುತ್ತಿದೆ. ಮೂರು ತಿಂಗಳ ನಂತರ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಮೂರನೇ ದಿನವೂ ಶೇ.39ರಷ್ಟು ಹೆಚ್ಚಳವಾಗಿದ್ದು, ಸೋಂಕಿತರ ಸಂಖ್ಯೆ 7 ಸಾವಿರ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 7,584 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. 24 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,791 ಸೋಂಕಿತರು ಗುಣಮುಖರಾಗಿದ್ದಾರೆ.

ಇದುವರೆಗೂ 42,644,092 ಸೋಂಕಿತರು ಗುಣಮುಖರಾಗಿದ್ದು, 524,747 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದು ಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 36,267ಕ್ಕೆ ಏರಿಕೆಯಾಗಿದೆ.

error: Content is protected !!