Saturday, 14th December 2024

ಹೊಂಡಕ್ಕೆ ಉರುಳಿ ಬಿದ್ದ ಕಾರು: 8 ಮಂದಿ ಸಾವು

ಬಿಹಾರ: ಬಿಹಾರದ ರೌತಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಒಟ್ಟು ಹತ್ತು ಜನರಿದ್ದರು.

ವಿವಾಹ ಕಾರ್ಯಕ್ರಮ ಮುಗಿಸಿ ಕಿಶನ್‌ಗಂಜ್​ಗೆ ಹಿಂದಿರುವಾಗ ಪೂರ್ನಿಯಾದ ಉಂಗಾರ್ ಒಪಿಯ ಕಾಂಜಿಯಾ ಮಿಡಲ್ ಸ್ಕೂಲ್ ಬಳಿ ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಕಿಶನ್‌ಗಂಜ್‌ನ ನುನಿಯಾ ಗ್ರಾಮದ ನಿವಾಸಿಗಳು ಎಂದು ಹೇಳಲಾ ಗುತ್ತಿದೆ.

ಗಾಯಾಳುಗಳ ಚೀರಾಟ ಕೇಳಿ ಸ್ಥಳಕ್ಕಾಮಿಸಿದ ಸ್ಥಳೀಯರು ಕಾರಿನಲ್ಲಿದ್ದ ಮೃತ ದೇಹಗಳನ್ನ ಹೊರತೆಗೆದಿದ್ದಾರೆ. ಚಾಲಕನ ಅತಿಯಾದ ವೇಗ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.