Thursday, 12th December 2024

ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ

#Petrol #Diesel

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ದೇಶದ ಹಲವು ರಾಜ್ಯಗಳಲ್ಲಿ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ.

ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆ ಯಾಗಿದೆ. ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು 30% ರಿಂದ 19.40% ಗೆ ಇಳಿಸಿದೆ, ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 8 ರೂ.ಗಳಷ್ಟು ಕಡಿಮೆಯಾಗಲಿದೆ.

ಇಂದು ಮಧ್ಯರಾತ್ರಿಯಿಂದ ಹೊಸ ದರಗಳು ಜಾರಿಗೆ ಬರಲಿವೆ ಎಂದು ದೆಹಲಿ ಸರ್ಕಾರ ತಿಳಿಸಿದೆ.