ನವದೆಹಲಿ: ಕೋವಿಡ್ ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 8,013 ಪ್ರಕರಣಗಳು ಪತ್ತೆಯಾಗಿದೆ. 119 ಮಂದಿ ಮೃತಪಡುತ್ತಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಮೃತಪಡುವವರ ಒಟ್ಟು ಸಂಖ್ಯೆ 5,13,843ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,2601ಕ್ಕೆ ತಲುಪಿದೆ ಎಂದು ಅಂಕಿಅಂಶ ವಿವರಿಸಿದೆ.
24ಗಂಟೆಯಲ್ಲಿ 8,871 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 16,765 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖ ರಾಗಿದ್ದಾರೆ.ದೇಶಾದ್ಯಂತ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,23,07,686ಕ್ಕೆ ತಲುಪಿದೆ.