Thursday, 12th December 2024

ಕರೋನಾ: 842 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 842 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,64,810ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,520ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,752ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,271 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,21,538ಕ್ಕೆ ತಲುಪಿದೆ.
ಒಂದೇ 1,52,750 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,23,86,407 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿ ಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆ ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,77,93,278 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.