Wednesday, 11th December 2024

ಮತ್ತೆ 8,774 ಜನರಲ್ಲಿ ಹೊಸ ಕರೋನಾ ಸೋಂಕು ಪತ್ತೆ

covid

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದರೂ ಶನಿವಾರಕ್ಕೆ ಹೋಲಿಸಿದರೆ, ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಮತ್ತೆ 8,774 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 621 ಜನ ಮಹಾ ಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 468554 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 105691 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9481 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ, 33998278 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ 10,91,236 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆ ಯಲ್ಲಿ 82,86,058 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,21,94,71,134 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.