Friday, 13th December 2024

8,822 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#covid
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 8,822 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಇನ್ನು ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 15 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,24,792ಕ್ಕೆ ಏರಿಕೆಯಾಗಿದೆ.

ಇನ್ನು 53,637 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 5,718 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,67,088 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 1,95,50,87,271 ಡೋಸ್ ಲಸಿಕೆ ಹಾಕಲಾಗಿದೆ.