Friday, 13th December 2024

ಕರೋನಾ ಬ್ರೇಕಿಂಗ್: 8 ಸಾವಿರದ 834 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 211 ಜನ ಮಹಾಮಾರಿಗೆ ಬಲಿ ಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 473537 ಕ್ಕೆ ಏರಿಕೆ ಯಾಗಿದೆ.

ದೇಶದಲ್ಲಿ 98416 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8834 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34069608 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಭಾನುವಾರದಂದು ದೇಶದಲ್ಲಿ 8,86,263 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 24,55,911 ಜನರಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೆ ಒಟ್ಟು 1,27,93,09,669 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.