Sunday, 15th December 2024

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಜನ ಕಾರ್ಮಿಕರ ಸಾವು

ಮಿಳುನಾಡು: ಶಿವಕಾಶಿಯ ಚೆನ್ನಗಲಂಪಟ್ಟಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಜನ ಕಾರ್ಮಿಕರ ದಾರುಣ ಸಾವಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಅನೇಕ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಭಾರೀ ಸ್ಫೋಟಕ್ಕೆ ಫ್ಯಾಕ್ಟರಿಯಲ್ಲಿ ತೀವ್ರ ಪ್ರಮಾಣದಲ್ಲಿ ಹೊಗೆ ಆವರಿಸಿದ್ದರಿಂದ, ಅನೇಕರು ಅಸ್ವಸ್ಥಗೊಂಡಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.