ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಆಪರೇಷನ್ ಗಂಗಾ ಹೆಸರಿನಲ್ಲಿ ಸ್ಥಳಾಂತರಿಸ ಲಾಗುತ್ತಿದ್ದು, 216 ಮಂದಿ ಭಾರತೀಯ ರನ್ನೊಳಗೊಂಡ 8ನೇ ವಿಮಾನ ಬುಡಾಪೆಸ್ಟ್ ನಿಂದ ನವದೆಹಲಿಗೆ ಬಂದಿಳಿಯಿತು.
ಆಪರೇಷನ್ ಗಂಗಾ’ದಡಿ ಮೂರು ವಿಮಾನಗಳು ಭಾರತೀಯ ಪ್ರಜೆಗಳನ್ನು ಹೊತ್ತು ಬುಕಾರೆಸ್ಟ್‌ನಿಂದ ಮುಂಬೈಗೆ ಪ್ರಯಾಣವನ್ನು ಪ್ರಾರಂಭಿಸಿವೆ ಎಂದು ಹೇಳಿದ್ದಾರೆ.
ಉಕ್ರೇನ್ ಪರಿಸ್ಥಿತಿ ಕುರಿತು ಸೋಮವಾರ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಉನ್ನತ ಮಟ್ಟದ ಸಭೆ ಇದಾಗಿದೆ. ಕೇಂದ್ರ ಸಚಿವ ರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ ನೇತೃತ್ವದ ತಂಡಗಳು ಉಕ್ರೇನ್‌ನಲ್ಲಿ ರಷ್ಯಾದ ಸೇನಾ ಕಾರ್ಯಾಚರಣೆಗಳ ಮಧ್ಯೆ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್‌ನ ನೆರೆಯ ದೇಶಗಳಿಗೆ ತೆರಳಲಿದ್ದಾರೆ.