Thursday, 12th December 2024

ಛಾತ್ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅಪಘಾತ: 9 ಸಾವು

ಕರೀಂಗಂಜ್ : ಅಸ್ಸೋಂನ ಕರೀಂಗಂಜ್ ಜಿಲ್ಲೆಯ ಭೈಖಾಲ್ ಪ್ರದೇಶದಲ್ಲಿ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈತಖಾಲ್ ಪ್ರದೇಶದ ಬಳಿ ರಿಕ್ಷಾಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಹಲವರು ಗಾಯಗೊಂಡಿದ್ದಾರೆ.

ಮೃತರು ಛಾತ್ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.