Thursday, 12th December 2024

ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕಿಗೆ ಭಾರತದಲ್ಲಿ ಇದುವರೆಗೂ 90 ಮಂದಿ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಹೊಸ ರೂಪಾಂತರಿ ಕೊರೊನಾದ 8 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತದಲ್ಲಿ ಕೋವಿಡ್-19ನ ಯುಕೆ ಮ್ಯುಟೆಂಟ್ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳ ಸಂಖ್ಯೆ 90ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಯುನೈಟೆಡ್ ಕಿಂಗ್ಡಮ್ʼನಿಂದ ಭಾರತಕ್ಕೆ ವಿಮಾನ ಹಾರಾಟ ಪುನರಾರಂಭವಾದ ನಂತರ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಜನವರಿ 23ರವರೆಗೆ ಪ್ರತಿ ವಾರ 30 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ಪ್ರಯಾಣಿಕರು ವಿಮಾನ ಹೊರಡುವ 72 ಗಂಟೆ ಗಳ ಮೊದಲು ಮತ್ತು ಬಂದ ನಂತರ RT-ಪಿಸಿಆರ್ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.