Thursday, 3rd October 2024

ಕರೋನಾ ಸೋಂಕು ಇಳಿಮುಖ: 92,596 ಪ್ರಕರಣ ಪತ್ತೆ

#covid

ನವದೆಹಲಿ: ಲಾಕ್ ಡೌನ್ ಕಾರಣದಿಂದಾಗಿ ದೇಶದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಕಳೆದ ಎರಡು ದಿನಗಳಿಂದ 1 ಲಕ್ಷಕ್ಕೂ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 92,596 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, 2219 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಬಲಿಯಾದವರ ಸಂಖ್ಯೆ 3,53,528 ಕ್ಕೆ ಏರಿಕೆಯಾಗಿದೆ.

12,31,415 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,75,04,126 ಸೋಂಕಿತರು ಗುಣಮುಖರಾಗಿದ್ದಾರೆ. 1,62,664 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.