Thursday, 12th September 2024

ಕರೋನಾ: 92 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 92 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದು ಕಳೆದ ನಾಲ್ಕು ತಿಂಗಳಲ್ಲಿಯೇ ಅತಿ ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಗಳಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ 531891 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಿದ್ದು, ದೇಶದಲ್ಲಿ 2350 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44458639 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 220,67,30,771 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 31,616 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.