Saturday, 23rd November 2024

93,249 ಕೊರೊನಾ ಸೋಂಕು ಪ್ರಕರಣ ದೃಢ, 513 ಮಂದಿ ಸಾವು

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 513 ಮಂದಿ ಮೃತಪಟ್ಟಿದ್ದಾರೆ.

ಭಾನುವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯಂತೆ ಒಂದೇ ದಿನ 60,048 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 1,24,85,509 ಸೋಂಕಿತರ ಪೈಕಿ 1,16,29,289 ಮಂದಿ ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಒಟ್ಟಾರೆ 1,64,623 ಮಂದಿ ಮೃತಪಟ್ಟಿದ್ದು, 6,91,597 ಸಕ್ರಿಯ ಪ್ರಕರಣಗಳಿವೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ