Saturday, 23rd November 2024

833 ಹೊಸ ಕರೋನಾ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 833 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆ ಯಾಗಿದ್ದು, ಈ ಮೂಲಕ ಈವರೆಗೆ ಸೋಂಕು ಪ್ರಕರಣಗಳ ಸಂಖ್ಯೆ 4,46,65,643 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಕೇರಳದಲ್ಲಿ ಮೂವರು ಸೇರಿದಂತೆ ಒಟ್ಟು 8 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,30,528 ಜನರು ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,553 ಕ್ಕೆ ಇಳಿಕೆಯಾಗಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.03ರಷ್ಟು ಸಕ್ರಿಯ ಪ್ರಕರಣ ಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 219.79 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.