Sunday, 15th December 2024

ಜೋಧ್‌ಪುರದಲ್ಲಿ ಹಿಂಸಾಚಾರ: 97 ಮಂದಿ ಬಂಧನ

ಜೋಧ್‌ಪುರ (ರಾಜಸ್ಥಾನ): ಈದ್‌ ಸಂಭ್ರಮದ ಮೊದಲು ಜೋಧ್‌ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಘಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ಇದುವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಉನ್ನತ ಮಟ್ಟದ ಅಧಿಕಾರಿಗಳನ್ನು ನಿಯೋಜಿಸ ಲಾಗಿದೆ. ಜಿಲ್ಲೆಯಲ್ಲಿ ನಡೆಯುವ ಪ್ರತಿ ಯೊಂದು ಸಣ್ಣ ಘಟನೆಗಳ ಮೇಲೆ ನಿಗಾ ಇಡಲಾಗಿದೆ. ಘಟನೆಗಳಿಗೆ ಸಂಬಂಧಿಸಿದಂತೆ ಒಟ್ಟು 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ರಾಜಸ್ಥಾನದ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಅವರು ಜೋಧ್‌ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಘಟನೆಗಳ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರಕ್ಕೆ ತಿಳಿಸಲು ಅಗತ್ಯ ಸೂಚನೆಗಳನ್ನು ನೀಡುವಂತೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.